
ಇಸ್ರೇಲ್ ಇರಾನ್ ರಾಜಧಾನಿಯ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಸರ್ವೋಚ್ಚ ನಾಯಕ ಮತ್ತು ಅಧ್ಯಕ್ಷರಗಳ ಭವನಗಳನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದೆ.
ಪ್ರಧಾನಿ ಮೋದಿ ಇಸ್ರೇಲ್ ನಿಂದ ಹೊರಟ ಬೆನ್ನಲ್ಲೇ, ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಸಮರ ಸಾರಿದೆ. ಇರಾನ್ ದಾಳಿಗೆ ಪ್ರತಿದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
“ಇರಾನ್ ಆಡಳಿತದಿಂದ ಬೆದರಿಕೆಗಳನ್ನು ನಿವಾರಿಸುವುದು ಇರಾನ್ ಮೇಲಿನ ಅಮೆರಿಕ ಇಸ್ರೇಲ್ ದಾಳಿಯ ಗುರಿಯಾಗಿದೆ” ಎಂದು ಅಮೇರಿಕಾ ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ.
ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಆಯೋಗದ ಮುಖ್ಯಸ್ಥ ಇಬ್ರಾಹಿಂ ಈ ಕುರಿತು ತೀವ್ರ ಪ್ರತಿಕ್ರಿಯೆ ನೀಡಿದ್ದು, “ನಾವು ನಿಮಗೆ ಎಚ್ಚರಿಕೆ ನೀಡಿದ್ದೇವೆ. ಈಗ ನೀವು ನಿಮ್ಮ ನಿಯಂತ್ರಣದಲ್ಲಿ ಇಲ್ಲದ ಆದಿಯನ್ನು ಪ್ರಾರಂಭಿಸಿದ್ದೀರಿ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.






