27.8 C
Udupi
Saturday, February 28, 2026
spot_img
spot_img
HomeBlogಮಾ.1ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಎಚ್.ಡಿ. ದೇವೇಗೌಡ ಭೇಟಿ

ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಎಚ್.ಡಿ. ದೇವೇಗೌಡ ಭೇಟಿ

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಅವರು ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ. ಅವರು ಸಂಜೆ 5.20ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಿ, ಬಿಳಿನೆಲೆ ಹೆಲಿಪ್ಯಾಡ್‌ನಲ್ಲಿ ಇಳಿದು ನಂತರ ಕ್ಷೇತ್ರದತ್ತ ಪ್ರಯಾಣಿಸಲಿದ್ದಾರೆ.

ಅದಾದ ನಂತರ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ, ಸಂಜೆ 6 ಗಂಟೆಗೆ ದೇವಸ್ಥಾನದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ. ಅದೇ ದಿನ ರಾತ್ರಿ ಸುಬ್ರಹ್ಮಣ್ಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವ ಕಾರ್ಯಕ್ರಮವೂ ನಿಗದಿಯಾಗಿದೆ.
ಮಾ.2ರಂದು ಬೆಳಗ್ಗೆ 6 ಗಂಟೆಗೆ ಮತ್ತೊಮ್ಮೆ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 2.30ಕ್ಕೆ ರಸ್ತೆ ಮಾರ್ಗವಾಗಿ ಬಿಳಿನೆಲೆ ಹೆಲಿಪ್ಯಾಡ್‌ಗೆ ತೆರಳಿ, 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ. ಅವರ ಪ್ರವಾಸದ ಹಿನ್ನೆಲೆ ಝೆಡ್ ಪ್ಲಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page