30.1 C
Udupi
Sunday, March 1, 2026
spot_img
spot_img
HomeBlogಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆ ಹಿರಿಯಂಗಡಿ ,ಕಾರ್ಕಳ

ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆ ಹಿರಿಯಂಗಡಿ ,ಕಾರ್ಕಳ

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ವಿಜ್ಞಾನೋತ್ಸವ


ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ವಿಜ್ಞಾನೋತ್ಸವವನ್ನು ಬಹಳ ಸಂತೋಷದಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ದಿನಾಂಕ 28.02.2026 ಶನಿವಾರದಂದು ಶಾಲಾ ಸಭಾಂಗಣದಲ್ಲಿ ನಡೆಯಿತು.ಈ ವಿಜ್ಞಾನೋತ್ಸವದ ಮುಖ್ಯ ಉದ್ದೇಶ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮತ್ತು ಕುತೂಹಲವನ್ನು ಹೆಚ್ಚಿಸುವುದಾಗಿದೆ.

ವಿದ್ಯಾರ್ಥಿಗಳು ವಿವಿಧ ವಿಜ್ಞಾನ ಮಾದರಿಗಳು, ಪ್ರಯೋಗಗಳು ಮತ್ತು ಚಾರ್ಟ್‌ಗಳನ್ನು ಪ್ರದರ್ಶಿಸಿದರು. ಕೆಲವು ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಶಕ್ತಿ ಸಂರಕ್ಷಣೆ, ರೋಬೋಟಿಕ್ಸ್ ಹಾಗೂ ಅಂತರಿಕ್ಷ ವಿಜ್ಞಾನ ವಿಷಯಗಳ ಮೇಲೆ ತಮ್ಮ ಪ್ರಾಜೆಕ್ಟ್‌ಗಳನ್ನು ವಿವರಿಸಿದರು. ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ರಸಪ್ರಶ್ನೆ ಕಾರ್ಯಕ್ರಮಗಳನ್ನು ನಡೆಸಲಾಯಿತು ಅದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಪ್ರೋತ್ಸಾಹಿಸಲಾಯಿತು.ಈ ಕಾರ್ಯಕ್ರಮವನ್ನು ನಮ್ಮಶಾಲಾ ಮುಖ್ಯ ಶಿಕ್ಷಕರು ಉದ್ಘಾಟಿಸಿ,ವಿಜ್ಞಾನವನ್ನು ನಮ್ಮ ಜೀವನದಲ್ಲಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಎಲ್ಲಾ ಅಧ್ಯಾಪಕವೃಂದದವರು ಉಪಸ್ಥಿತರಿದ್ದರು.ವಿಜ್ಞಾನ ಶಿಕ್ಷಕಿ ಶ್ರೀಮತಿ ಸುಪ್ರಿಯ ಇವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿತು ಮತ್ತು ವಿಜ್ಞಾನ ವಿಷಯದ ಬಗ್ಗೆ ಹೆಚ್ಚಿನ ತಿಳುವಳಿಕೆಯನ್ನು ನೀಡಿತು.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page