
ಉತ್ತರ ಕರ್ನಾಟಕ ಸೇರಿದಂತೆ ಹಲವು ಭಾಗಗಳಲ್ಲಿ ಮಾರ್ಚ್ ನಿಂದ ಮೇಯವರೆಗೆ ಅತಿ ಹೆಚ್ಚು ತಾಪಮಾನ ದಾಖಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕ, ಉತ್ತರ ತಮಿಳನಾಡು ,ಪಶ್ಚಿಮ ರಾಜಸ್ಥಾನ, ಗುಜರಾತ್, ಹರಿಯಾಣ, ಪಂಜಾಬ್ ಆಂಧ್ರಪ್ರದೇಶದ ಭಾಗಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿ ಗಾಳಿಯ ಎಚ್ಚರಿಕೆ ನೀಡಲಾಗಿದೆ.






