27.4 C
Udupi
Tuesday, January 27, 2026
spot_img
spot_img
HomeBlogಇರಾನ್‌ನಲ್ಲಿರುವ ಭಾರತೀಯರಿಗೆ ತುರ್ತು ಎಚ್ಚರಿಕೆ: ಸಾಧ್ಯವಾದಷ್ಟು ಬೇಗ ದೇಶ ತೊರೆಯಲು ಸೂಚನೆ

ಇರಾನ್‌ನಲ್ಲಿರುವ ಭಾರತೀಯರಿಗೆ ತುರ್ತು ಎಚ್ಚರಿಕೆ: ಸಾಧ್ಯವಾದಷ್ಟು ಬೇಗ ದೇಶ ತೊರೆಯಲು ಸೂಚನೆ

ನವದೆಹಲಿ: ಇರಾನ್‌ನಲ್ಲಿ ಕಳೆದ 18 ದಿನಗಳಿಂದ ಮುಂದುವರಿದಿರುವ ಪ್ರತಿಭಟನೆಗಳು ದಿನೇದಿನೇ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದಾಳಿ ನಡೆಸುವ ಬಗ್ಗೆ ಎಚ್ಚರಿಕೆ ನೀಡಿರುವ ಕಾರಣ, ಇರಾನ್‌ನಲ್ಲಿ ಇರುವ ಭಾರತೀಯರು ಶೀಘ್ರದಲ್ಲೇ ದೇಶ ತೊರೆಯುವಂತೆ ಭಾರತ ಸರ್ಕಾರ ಸಲಹೆ ನೀಡಿದೆ.

ಈ ಕುರಿತು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪ್ರಸ್ತುತ ಇರಾನ್‌ನಲ್ಲಿ ವಾಸಿಸುತ್ತಿರುವ ಭಾರತೀಯ ನಾಗರಿಕರು — ವಿದ್ಯಾರ್ಥಿಗಳು, ಯಾತ್ರಾರ್ಥಿಗಳು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು — ಲಭ್ಯವಿರುವ ವಾಣಿಜ್ಯ ವಿಮಾನಗಳು ಸೇರಿದಂತೆ ಯಾವುದೇ ಸೂಕ್ತ ಸಾರಿಗೆ ವ್ಯವಸ್ಥೆಯ ಮೂಲಕ ದೇಶವನ್ನು ಬಿಡುವಂತೆ ತಿಳಿಸಿದೆ.

ಇದಲ್ಲದೆ, ತುರ್ತು ಪರಿಸ್ಥಿತಿ ಎದುರಾದಲ್ಲಿ ಸಂಪರ್ಕಿಸಲು 989128109115, 989128109109, 989128109102, 989932179359 ಎಂಬ ದೂರವಾಣಿ ಸಂಖ್ಯೆಗಳು ಹಾಗೂ cons.tehran@mea.gov.in ಇಮೇಲ್ ವಿಳಾಸವನ್ನು ಪ್ರಕಟಿಸಲಾಗಿದೆ.

ಪ್ರತಿಭಟನಾಕಾರರ ವಿರುದ್ಧ ಸರ್ಕಾರ ಕಠಿಣ ಕ್ರಮ, ಬಂಧನ ಹಾಗೂ ಗಲ್ಲುಶಿಕ್ಷೆಯ ಎಚ್ಚರಿಕೆ ನೀಡುತ್ತಿರುವ ಪರಿಸ್ಥಿತಿಯೊಂದೆಡೆ, ಅಮೆರಿಕ ಅಧ್ಯಕ್ಷರಿಂದ ದಾಳಿಯ ಎಚ್ಚರಿಕೆಯೂ ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಭಾರತೀಯರ ಭದ್ರತೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಸರ್ಕಾರ ಈ ಸೂಚನೆ ನೀಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page