
ರಾಜ್ಯದ ಹಲವೆಡೆ ಇಂದು ಒಣಹವೆ ಮುಂದುವರೆಯಲಿದ್ದು, ಬೆಂಗಳೂರು ನಗರದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡು ಭಾಗಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.






















































