
ಮಾರ್ಚ್ 8, 2026ರಂದು ಕಾರ್ಕಳ ತಾಲ್ಲೂಕಿನ ಮಾಳದಲ್ಲಿರುವ ಶ್ರೀ ಗುರುಕುಲ ವಿದ್ಯಾವರ್ಧಕ ಸಂಘ (ರಿ.) ಮಾಳ ಹಾಗೂ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮಾಳ ಇದರ ವತಿಯಿಂದ ಅಮೃತ ಮಹೋತ್ಸವದ ಕೃತಜ್ಞತಾ ಸಮರ್ಪಣಾ ಸಭೆ ಹಾಗೂ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಂಜೆ 4 ಗಂಟೆಗೆ ಶಾಲಾ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು ವಿವಿಧ ಗಣ್ಯರು ಹಾಗೂ ಅತಿಥಿಗಳ ಸಮ್ಮುಖದಲ್ಲಿ ಸಮಾರಂಭಕ್ಕೆ ಚಾಲನೆ ನೀಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷರು ಪಾಲ್ಗೊಳ್ಳಲಿದ್ದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸ್ಮರಣ ಸಂಚಿಕೆಯ ಬಿಡುಗಡೆ ಮಾಡಲಿದ್ದಾರೆ. ನಾಗಭೂಷಣ್ ಜೋಶಿ, ಶ್ರೀಮತಿ ಪೂರ್ಣಿಮಾ ಶಣೈ, ಶ್ರೀಮತಿ ವನಜಾ ಪರವ ಚೌಕಿ ಹಾಗೂ ಡಾ. ಎಂ ಪ್ರಭಾಕರ್ ಜೋಶಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.






