
ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದ್ದು, ಬೆಂಗಳೂರು ನಗರದಲ್ಲಿ, 39 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನ ಭಾಗಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ ಧಾರವಾಡ ,ಕಲಬುರಗಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಹಲವು ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






















































