
ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ತಾಪಮಾನ ಏರಿಕೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಮಾರ್ಚ್ 2ನೇ ವಾರದ ಬಳಿಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಇನ್ನಷ್ಟು ಏರಿಕೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.





















































































