
ಕಾರ್ಕಳ: 77ನೇ ಗಣರಾಜ್ಯೋತ್ಸವವನ್ನು ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪೂರ್ವಾಹ್ನ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಡಾ. ಪ್ರಶಾಂತ್ ಹೆಗ್ಡೆಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್. ಕಾಮತ್ ರವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ರಾಷ್ಟ್ರಭಕ್ತಿಗೆ ಸಂಬಂಧಿಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ವಿಶೇಷ ದಿನದ ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.



















