
ವಿಧಾನಸಭೆ: ನೇಮಕಾತಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆಯಲು ಕಠಿಣ ಕಾನೂನು ಜಾರಿಗೆ ತಂದಿದ್ದರೂ ಕೆಪಿಎಸ್‌ಸಿ ಗೆ ಯಾವುದೇ ಭಯವಿಲ್ಲದಂತಾಗಿದೆ. ಹೀಗಾಗಿ ಈ ಸಂಸ್ಥೆಯನ್ನೇ ರದ್ದುಪಡಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.
ಬಿಜೆಪಿ ಸದಸ್ಯ ವಿ.ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ ಕೆಪಿಎಸ್‌ಸಿಯಲ್ಲಿ ನಡೆಯುತ್ತಿರುವ ನೇಮಕಾತಿ ಅಕ್ರಮಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಇದಕ್ಕೆ ಎಸ್.ಸುರೇಶ್ ಕುಮಾರ್ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಹ ಬೆಂಬಲ ವ್ಯಕ್ತಪಡಿಸಿದರು.
ಚರ್ಚೆಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ನೇಮಕಾತಿಯಲ್ಲಿ ಭ್ರಷ್ಟಾಚಾರ ತಡೆಯಲು ಕಠಿಣ ಕಾನೂನು ಮಾಡಿದ್ದರೂ ಖಾಲಿ ಉತ್ತರಪತ್ರಿಕೆ ಸಲ್ಲಿಸಿದವರಿಗೂ ಆಯ್ಕೆ ಸಿಗುತ್ತಿರುವ ಆರೋಪಗಳು ಕೇಳಿಬರುತ್ತಿವೆ ಎಂದು ಹೇಳಿದರು. ಇಂತಹ ಪರಿಸ್ಥಿತಿಯಲ್ಲಿ ಯುವಕರ ವಿಶ್ವಾಸ ಕಾಪಾಡಲು ಕೆಪಿಎಸ್‌ಸಿ ವ್ಯವಸ್ಥೆಯ ಕುರಿತು ಗಂಭೀರ ಕ್ರಮ ಅಗತ್ಯವಿದೆ ಎಂದರು.


ಇನ್ನೊಂದೆಡೆ ಸುನಿಲ್ ಕುಮಾರ್ ಮಾತನಾಡಿ, ಇತ್ತೀಚಿನ ಗೆಜೆಟೆಡ್ ಪ್ರೊಬೆಷನರಿ ನೇಮಕಾತಿಯಲ್ಲಿ ಅಕ್ರಮದ ಅನುಮಾನಗಳು ಮೂಡಿದ್ದು, ಪರೀಕ್ಷೆ ಮತ್ತು ಫಲಿತಾಂಶದ ಪಾರದರ್ಶಕತೆ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.







