
ದೇಶದಲ್ಲಿ ಎದುರಾಗಿರುವ ಸಿಲಿಂಡರ್ ಅಭಾವದ ಬಗ್ಗೆ ಕೇಂದ್ರ ಸರಕಾರ ಮುನ್ನೆಚ್ಚರಿಕೆ ವಹಿಸದಿರುವುದೇ ಇಂದಿನ ಪರಿಸ್ಥಿತಿಗೆ ಕಾರಣ, ಇದರ ಬಗ್ಗೆ ರಾಜ್ಯ ಸರಕಾರವನ್ನು ಪ್ರಶ್ನಿಸುವುದು ಸರಿಯಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಉಂಟಾಗಿರುವ ಸಿಲಿಂಡರ್ ಕೊರತೆಯ ವಿಚಾರವಾಗಿ ಈಗಾಗಲೇ ಸಿಎಂ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ರಾಜ್ಯ ಸರಕಾರದಲ್ಲಿ ಯಾವುದೇ ಬದಲಾವಣೆ ಅಥವಾ ಗೊಂದಲಗಳಿಲ್ಲ. ಈ ಬಿಕ್ಕಟ್ಟನ್ನು ನಿವಾರಿಸಲು ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕಿದೆ ಎಂದರು.






