
ಭಾರತದ ಕ್ರೀಡಾ ದಿಗ್ಗಜೆ, ರಾಜ್ಯಸಭಾ ಸದಸ್ಯೆ ಪಿ.ಟಿ ಉಷಾ ಅವರ ಪತಿ ವಿ. ಶ್ರೀನಿವಾಸನ್ ( 67) ರವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಜನವರಿ 30ರ ಬೆಳಗಿನ ಜಾವ ವಿ. ಶ್ರೀನಿವಾಸನ್ ಅನಿರೀಕ್ಷಿತವಾಗಿ ತಮ್ಮ ನಿವಾಸದಲ್ಲಿ ಕುಸಿದು ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ ,ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಇಂಡಿಯನ್ ಒಲಂಪಿಕ್ ಅಸೋಸಿಯೇಷನ್ ನ ಅಧ್ಯಕ್ಷೆಯಾದ ಪಿ.ಟಿ ಉಷಾ ಇವರಿಗೆ ಪ್ರಧಾನಿ ನರೇಂದ್ರ ಮೋದಿ, ಕರೆ ಮಾಡಿ ಪತಿಯ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.



















