
ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವಿದ್ದು, ಇಂದು ಕೂಡ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಚಳಿಯ ವಾತಾವರಣ ಇರುವ ಕಾರಣ ಜನರು ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ ,ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಉತ್ತರ ಒಳನಾಡಿನ ಭಾಗಗಳಾದ ಬೆಳಗಾವಿ ,ಬೀದರ್ ,ವಿಜಯಪುರ, ಬಾಗಲಕೋಟೆ ಹಾವೇರಿ ಗದಗ ಹಲವು ಜಿಲ್ಲೆಗಳಲ್ಲಿ, ಒಣಹವೆ ಇರಲಿದೆ.



















