
ರಾಜ್ಯದಲ್ಲಿ ಹಲವು ದಿನಗಳಿಂದ ಒಣಹವೆ ವಾತಾವರಣ ಇದ್ದು, ಇಂದು ಕೂಡ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಉತ್ತರ ಒಳ ನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ. ದಕ್ಷಿಣ ಒಳನಾಡಿನಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ ,ಚಿಕ್ಕಮಗಳೂರು, ಹಾಸನ ,ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು, ಬಳ್ಳಾರಿ, ತುಮಕೂರು ,ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.



















