
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ,ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ ಚಿಕ್ಕಬಳ್ಳಾಪುರ, ಚಿತ್ರದುರ್ಗ ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ವಾತಾವರಣವಿರಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಣಹಾವೆ ಮುಂದುವರೆಯಲಿದೆ.






















































