
ಕರಾವಳಿ ಮತ್ತು ಉತ್ತರ ಒಳನಾಡು ಭಾಗಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನಲ್ಲೂ ಶುಷ್ಕ ವಾತಾವರಣವಿರಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಚಾಮರಾಜನಗರ ,ಚಿತ್ರದುರ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರು ನಗರದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದ್ದು, ಮಕ್ಕಳು ಮತ್ತು ವೃದ್ಧರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.




