
ರಾಜ್ಯದಲ್ಲಿ ಹಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಕೂಡ ಗುಡುಗು ಸಹಿತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ ,ಶಿವಮೊಗ್ಗ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.









