
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಿದ್ದು ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಚಳಿಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಶುಷ್ಕ ವಾತಾವರಣವಿರಲಿದೆ.
ಉತ್ತರ ಒಳನಾಡಿನ ಭಾಗಗಳಾದ ಬೆಳಗಾವಿ, ಬೀದರ್ ,ವಿಜಯಪುರ, ಬಾಗಲಕೋಟೆ ,ಹಾವೇರಿ, ಗದಗ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.




