
ಏಪ್ರಿಲ್ 2ರಿಂದ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಲಬುರಗಿ ಸೇರಿದಂತೆ ,ಉತ್ತರ ಕರ್ನಾಟಕದ ಭಾಗದಲ್ಲಿ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.
ಮಲೆನಾಡು ಭಾಗಗಳಲ್ಲಿ ಸಣ್ಣಗೆ ಮಳೆಯಾಗಲಿದೆ.
ಮಂಗಳೂರು ಉಡುಪಿ ಸೇರಿದಂತೆ, ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಹೆಚ್ಚಾಗಲಿದೆ. ಶಿವಮೊಗ್ಗ ,ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದೆ.
ತಾಪಮಾನ ಹೆಚ್ಚಿರುವ ಕಾರಣ, ಉತ್ತರ ಕರ್ನಾಟಕದ ಜನರು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ವರೆಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.





















































































