30 C
Udupi
Wednesday, February 18, 2026
spot_img
spot_img
HomeBlogಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ಕೃಷಿ ಅಧ್ಯಯನಕ್ಕೆ ಇರಬಹುದು

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ಕೃಷಿ ಅಧ್ಯಯನಕ್ಕೆ ಇರಬಹುದು

ಅಭಿಪ್ರಾಯ ವ್ಯಕ್ತಪಡಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ಕೃಷಿ ಅಧ್ಯಯನಕ್ಕೆ ಇರಬಹುದು. ಆಸ್ಟ್ರೇಲಿಯಾ ಸೇರಿದಂತೆ ಎಲ್ಲಾ ಕಡೆ ಕೃಷಿ ಇದೆ. ಅವರ ಹಣದಲ್ಲಿ ಎಲ್ಲಿಗೆ ಬೇಕಾದರೂ ಹೋಗಬಹುದು ನಮ್ಮಲ್ಲಿ ಯಾವುದೇ ಕದನ ಹಾಗೂ ಭಿನ್ನಾಭಿಪ್ರಾಯಗಳು ಇಲ್ಲ ಎಂದಿದ್ದಾರೆ.

ಇನ್ನು ರಾಜ್ಯ ಬಜೆಟ್ ವಿಚಾರದಲ್ಲಿ ಶಾಸಕರಿಗೆ ಯಾವುದೇ ಕೆಲಸ ಇಲ್ಲ. ಸಿ ಎಲ್ ಪಿ ಸಭೆಯಲ್ಲಿ ಬಜೆಟ್ ಕುರಿತು ಶಾಸಕರು ತಮ್ಮ ಅನಿಸಿಕೆಗಳನ್ನು ಈಗಾಗಲೇ ವ್ಯಕ್ತಪಡಿಸಿದ್ದಾರೆ. ಸಿಎಂ ಮತ್ತು ಹಣಕಾಸು ಇಲಾಖೆ, ಬಜೆಟ್ ತಯಾರಿಸಲಿದೆ ಎಂದಿದ್ದಾರೆ.

ಇನ್ನು ಕಾಂಗ್ರೆಸ್ ನಲ್ಲಿ ಹೈಕಮಾಂಡ್ ವ್ಯವಸ್ಥೆ ಇದೆ. ಯಾರೋ 10 ಜನ ಜೈಕಾರ ಕೂಗಿದರೆ ಏನು ಪ್ರಯೋಜನವಿಲ್ಲ. ಹೈಕಮಾಂಡ್ ಎಲ್ಲಾ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page