30.2 C
Udupi
Friday, April 3, 2026
spot_img
spot_img
HomeBlog'ಧೈರ್ಯ ಇದ್ದರೆ ಭವಿಷ್ಯದಲ್ಲಿ ಅಧಿಕಾರಕ್ಕೆ ಬಂದಾಗ ದ್ವಿಭಾಷಾ ನೀತಿಯನ್ನು ರದ್ದು ಪಡಿಸುವುದಾಗಿ ಬಿಜೆಪಿ ಘೋಷಿಸಲಿ' :...

‘ಧೈರ್ಯ ಇದ್ದರೆ ಭವಿಷ್ಯದಲ್ಲಿ ಅಧಿಕಾರಕ್ಕೆ ಬಂದಾಗ ದ್ವಿಭಾಷಾ ನೀತಿಯನ್ನು ರದ್ದು ಪಡಿಸುವುದಾಗಿ ಬಿಜೆಪಿ ಘೋಷಿಸಲಿ’ : ಸರ್ಕಾರದ ಸವಾಲು

spot_imgspot_img

ಬೆಂಗಳೂರು: ದ್ವಿಭಾಷಾ ನೀತಿ ಕುರಿತು ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಧೈರ್ಯ ಇದ್ದರೆ ಭವಿಷ್ಯದಲ್ಲಿ ಅಧಿಕಾರಕ್ಕೆ ಬಂದಾಗ ಈ ನೀತಿಯನ್ನು ರದ್ದುಪಡಿಸುವುದಾಗಿ ಬಿಜೆಪಿ ಬಹಿರಂಗವಾಗಿ ಘೋಷಿಸಲಿ ಎಂದು ಸವಾಲೆಸೆದಿದ್ದಾರೆ.

ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡುತ್ತಾ, ಯಾವುದೇ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಕಾನೂನು ತರುವ ಉದ್ದೇಶ ನಮ್ಮದಲ್ಲ. ಈ ನೀತಿಯನ್ನು ತೆಗೆದುಹಾಕುವ ಬಗ್ಗೆ ಯಡಿಯೂರಪ್ಪ ಅವರು ಸ್ಪಷ್ಟವಾಗಿ ಹೇಳಬೇಕು ಎಂದು ಸವಾಲು ಹಾಕಿ, ಹಿಂದಿ ವಿಚಾರವನ್ನು ರಾಜಕೀಯವಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿದರು.

ಈ ನಿರ್ಧಾರವನ್ನು ಯಾರೊಬ್ಬರ ಒತ್ತಡದಿಂದ ತೆಗೆದುಕೊಳ್ಳಲಾಗಿಲ್ಲ. ಸುಮಾರು ಏಳು-ಎಂಟು ತಿಂಗಳ ಚರ್ಚೆಗಳ ನಂತರವೇ ಈ ತೀರ್ಮಾನ ಕೈಗೊಳ್ಳಲಾಗಿದೆ. ಪೋಷಕರ ಬಹುಮತವೂ ಮಕ್ಕಳ ಮೇಲೆ ಅನಗತ್ಯ ಒತ್ತಡ ಬೇಡವೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ನೀತಿಯಿಂದ ಬಡವರಿಗೆ ಪ್ರಯೋಜನವಾಗುತ್ತದೆ. ಆದರೆ ಖಾಸಗಿ ಸಂಸ್ಥೆಗಳು ಇದನ್ನು ತುಚ್ಛವಾಗಿ ತೆಗೆದುಕೊಂಡಿದ್ದು, ಅವಶ್ಯಕತೆ ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಧಾನಿ ಮೋದಿ ಅವರನ್ನು ಸಂತೋಷಪಡಿಸಲು ಬಿಜೆಪಿ ಹಿಂದಿಯನ್ನು ಉತ್ತೇಜಿಸುತ್ತಿದೆ. ಇದು ಸರಿಯಾದ ಕ್ರಮವಲ್ಲ, ದೇಶದ ಅನೇಕ ಕಡೆ ಎರಡು ಭಾಷಾ ಪದ್ಧತಿ ಅನುಸರಿಸಲಾಗುತ್ತಿದೆ. ಕೆಲ ರಾಜ್ಯಗಳಲ್ಲಿ ಕನ್ನಡವೂ ಮೂರನೇ ಭಾಷೆಯಾಗಿದೆ. ಜೀವನೋಪಾಯಕ್ಕಾಗಿ ಕನ್ನಡಿಗರು ಹಿಂದಿ ಕಲಿಸುತ್ತಿರುವುದು ಸಹಜ, ಇದರಿಂದ ಅವರಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page