ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ “ಶ್ರೀ ಮನ್ಮಹಾರಥೋತ್ಸವ” ದ ಪ್ರಯುಕ್ತ ಗುರುವಾರ ( 19-2-2026) ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ಎಲ್ಲರ ಮೆಚ್ಚುಗೆ ಪಡೆಯಿತು.
ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾದ ಕೆಲ್ಲಗುತ್ತು ಸಬ್ರಬೈಲು ಜಯವರ್ಮರಾಜ ಬಳ್ಳಾಲ್ ಮತ್ತು ಸಹೋದರ , ಸಹೋದರಿಯರು ಹಾಗೂ ಕುಟುಂಬಸ್ಥರು ಮತ್ತು ಅಪರ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.



