
ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಇಂದು ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಬಳ್ಳಾಪುರ ,ಕೋಲಾರ ,ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ,ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.




























