
ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಜೆಯ ವೇಳೆಗೆ ಸಣ್ಣಗೆ ಮಳೆಯ ಸಾಧ್ಯತೆ ಇದೆ.
ಮೈಸೂರು, ಕೊಡಗು ,ಹಾಸನ ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಮಂಗಳೂರು ,ಉಡುಪಿ ಮತ್ತು ಕಾರವಾರ ಭಾಗಗಳಲ್ಲಿ ಸೆಕೆಯ ಪ್ರಮಾಣ ಹೆಚ್ಚಾಗಲಿದೆ. ಧಾರವಾಡ ಬೆಳಗಾವಿ ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದೆ ಎನ್ನಲಾಗಿದೆ.








