
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳದಿನಾಂಕ 14 /4 /2026 ರಂದು ಡಾ.ಬಿ ಆರ್ ಅಂಬೇಡ್ಕರ್ ರವರ ಜಯಂತಿಯನ್ನು ಆಚರಿಸಲಾಯಿತು.
ಅಂಬೇಡ್ಕರ್ ಭಾವಚಿತ್ರಕ್ಕೆ ಹೂ ಹಾರಗಳಿಂದ ಅಲಂಕರಿಸಿ ದೀಪ ಬೆಳಗಿಸಿ, ಪುಷ್ಪಾರ್ಚನೆಗೈದರು. ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ ಮತ್ತು ಸಹ ಶಿಕ್ಷಕಿ ಶ್ರೀಮತಿ ಪ್ರತಿಕ್ಷಾ ರವರು ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮದ ನಿರ್ವಹಣೆಯನ್ನು ಶ್ರೀಮತಿ ಅನುಪಮಾ ರವರು ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಮಕ್ಕಳು ಶಿಕ್ಷಕರು ಉಪಸ್ಥಿತರಿದ್ದರು.











