31.3 C
Udupi
Friday, April 17, 2026
spot_img
spot_img
HomeBlogರಾಜ್ಯದಲ್ಲಿ ಬಿಸಿಗಾಳಿ ತೀವ್ರ: 12 ಜಿಲ್ಲೆಗಳಿಗೆ ಎಚ್ಚರಿಕೆ,

ರಾಜ್ಯದಲ್ಲಿ ಬಿಸಿಗಾಳಿ ತೀವ್ರ: 12 ಜಿಲ್ಲೆಗಳಿಗೆ ಎಚ್ಚರಿಕೆ,

ಕಲಬುರಗಿಯಲ್ಲಿ 45°C ದಾಖಲೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಉತ್ತರ ಕರ್ನಾಟಕ ಭಾಗಗಳಲ್ಲಿ ಉಷ್ಣಾಂಶ ಗರಿಷ್ಠ ಮಟ್ಟಕ್ಕೆ ಏರಿದೆ. ಕಲಬುರಗಿಯಲ್ಲಿ 45 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, 12 ಜಿಲ್ಲೆಗಳಿಗೆ ನಾಲ್ಕು ದಿನಗಳ ಕಾಲ ಹೀಟ್‌ವೇವ್‌ ಎಚ್ಚರಿಕೆ ನೀಡಲಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಏಪ್ರಿಲ್‌ 19ರವರೆಗೆ ಉತ್ತರ ಒಳನಾಡು ಪ್ರದೇಶಗಳಲ್ಲಿ ಬಿಸಿಗಾಳಿ ಮುಂದುವರಿಯಲಿದೆ. ಬೀದರ್‌, ಕಲಬುರಗಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿಯೂ ತಾಪಮಾನ 38–39 ಡಿಗ್ರಿಗೆ ಏರಬಹುದೆಂದು ತಿಳಿಸಲಾಗಿದ್ದು ಕರಾವಳಿ ಭಾಗಗಳಲ್ಲೂ ಉಷ್ಣಾಂಶ ಹೆಚ್ಚುವ ಸಾಧ್ಯತೆ ಇದೆ. ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಆರೆಂಜ್‌ ಅಲರ್ಟ್‌ ಜಾರಿಯಲ್ಲಿದ್ದು, ಮಧ್ಯಾಹ್ನ ಸಮಯದಲ್ಲಿ ಹೊರಗೆ ಹೋಗದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಆರೋಗ್ಯದ ದೃಷ್ಟಿಯಿಂದ ಹೆಚ್ಚಿನ ಜಾಗ್ರತೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page