
ಬೆಂಗಳೂರು: ರಾಜ್ಯದ ಗಮನಸೆಳೆದ ಧಾರವಾಡ ಹುಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಹೊರಬಿದ್ದಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಈ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 17 ಮಂದಿಯನ್ನು ದೋಷಿಗಳೆಂದು ನ್ಯಾಯಾಲಯ ಈಗಾಗಲೇ ಘೋಷಿಸಿತ್ತು. ಬುಧವಾರ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ತೀರ್ಪು ಪ್ರಕಟಿಸಿ, ಶಿಕ್ಷೆಯ ಪ್ರಮಾಣ ನಿರ್ಧಾರಕ್ಕಾಗಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ್ದರು. ಇದೀಗ ಅಂತಿಮವಾಗಿ ಶಿಕ್ಷೆಯ ವಿವರವನ್ನು ಪ್ರಕಟಿಸಲಾಗಿದೆ.


































