
ರಾಜ್ಯದಲ್ಲಿ ತಾಪಮಾನ ಹೆಚ್ಚಾಗಿದ್ದು ಮುಂದಿನ ಎರಡು ದಿನಗಳ ಕಾಲ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ರಾಜ್ಯದ ಹಲವು ಭಾಗಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಕರಾವಳಿ ಭಾಗಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ಆದರಿಂದ ಜನರು 10 ಗಂಟೆಯಿಂದ ಸಂಜೆ 5 ವರೆಗೆ ಅನಗತ್ಯವಾಗಿ ಮನೆಯಿಂದ ಹೊರಗೆ ಬರದಂತೆ ಹಾಗೂ ಹೆಚ್ಚು ನೀರು ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹೆಚ್ಚಿನ ತಾಪಮಾನ ದಾಖಲಾಗಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ಭಾಗಗಳಲ್ಲಿ 32 ಡಿಗ್ರಿ ಸೆಲ್ಸಿಯ ಸ್ಥಾಪಮಾನ ದಾಖಲಾಗಿದ್ದು 42 ಡಿಗ್ರಿ ಗೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.













