
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದ್ದು, ಇಂದು ಕೂಡ ಕರಾವಳಿ ಭಾಗಗಳಲ್ಲಿ ಬಿಸಿಲಿನ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ,ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆ ಇರಲಿದ್ದು, ಹೀಟ್ ವೇವ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ಕಾರಣ ಜನರು ಎಚ್ಚರಿಕೆ ಬಯಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.













