
ನಾಳೆ ಏಪ್ರಿಲ್ 23 ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಹಿಂದಿ ಭಾಷೆಯ ಅಂಕಗಳ ವಿಚಾರದಲ್ಲಿ ಹೈಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇದ್ದ ಕಾರಣ ತಡೆಹಿಡಿಯಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟಿಸಲಾಗುವುದು ಎಂದು ಹೈಕೋರ್ಟ್ ತೀರ್ಪಿನ ನಂತರ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆದಿದ್ದು, ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ KSEAB ಅಧಿಕೃತ ವೆಬ್ಸೈಟ್ karresult s.nic.in ಗೆ ಭೇಟಿ ನೀಡಿ ತಮ್ಮ ಅಂಕಗಳನ್ನು ವೀಕ್ಷಿಸಬಹುದು ಮತ್ತು ಡೌನ್ಲೋಡ್ ಮಾಡಿಕೊಳ್ಳಬಹುದು.













