
ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಜೋಕಾಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಪ್ರಣಮ್ಯ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ.
ಮೂರು ದಿನಗಳ ಹಿಂದೆ ನಡೆದ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೇಸಿಗೆ ರಜೆಗೆ ಚಿಕ್ಕಮ್ಮನ ಮನೆಗೆ ಬಂದಿದ್ದ ಪ್ರಣಮ್ಯ, ಏಪ್ರಿಲ್ 20ರಂದು ಒಬ್ಬಳೇ ಕೋಣೆಯಲ್ಲಿ ಪಂಚೆಯಿಂದ ಜೋಕಾಲಿ ಆಡುತ್ತಿದ್ದಳು. ಈ ವೇಳೆ ಕುಣಿಕೆ ಕುತ್ತಿಗೆಗೆ ಬಿಗಿದು ಉಸಿರಾಟಕ್ಕೆ ತೊಂದರೆಯಾಗಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚಿನ ಎಚ್ಚರಿಕೆ ಅಗತ್ಯವಿದೆ ಎಂದು ಸ್ಥಳೀಯರು ಹೇಳಿದ್ದಾರೆ.













