
ಕರಾವಳಿಯಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಾಗಿದ್ದು, ಇಂದು ಕೂಡ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ.
ಉಷ್ಣ ಅಲೆಯ ಜೊತೆಗೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ನಷ್ಟು ಏರಿಕೆಯಾಗುವ ಸಾಧ್ಯತೆಯಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ ,ಧಾರವಾಡ, ಹಾವೇರಿ, ಗದಗ, ಯಾದಗಿರಿ ,ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.













