ಪ್ರೌಢಶಾಲೆ ಹಾಗೂ ದ್ವಿತೀಯ ಪಿಯುಸಿ ಶೇ. 100 ಫಲಿತಾಂಶ ಫಲಿತಾಂಶ

ಕಾರ್ಕಳ: ಕಾರ್ಕಳದ ಎಸ್.ವಿ.ಟಿ ವನಿತಾ ಪದವಿಪೂರ್ವ ಕಾಲೇಜು ವಿನಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಪ್ರವೇಶಾತಿ ಆರಂಭವಾಗಿದೆ. ಸಂಸ್ಥೆಯು ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಶಿಸ್ತುಬದ್ಧ ಶಿಕ್ಷಣಕ್ಕೆ ಹೆಸರಾಗಿದ್ದು, ವಿದ್ಯಾರ್ಥಿನಿಯರ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುತ್ತಿದೆ.
ಪ್ರೌಢಶಾಲಾ ವಿಭಾಗದಲ್ಲಿ (ಕನ್ನಡ ಮಾಧ್ಯಮ) ಉಚಿತ ಪುಸ್ತಕ, ಸಮವಸ್ತ್ರ, ಶುಚಿ-ರುಚಿಯಾದ ಬಿಸಿ ಊಟದ ವ್ಯವಸ್ಥೆ, ಕ್ರೀಡೆಗೆ ಪ್ರೋತ್ಸಾಹ, ಉಚಿತ ಕಂಪ್ಯೂಟರ್ ತರಬೇತಿ ಸೇರಿದಂತೆ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲಾಗುವುದು.
ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಕಲಾ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಪ್ರವೇಶ ಅವಕಾಶಗಳಿವೆ. ಅನುಭವಿ ಶಿಕ್ಷಕರಿಂದ ಗುಣಮಟ್ಟದ ಬೋಧನೆ, ಗುಣಮಟ್ಟದ ಬಿಸಿಯೂಟ ಯೋಜನೆ ವಿವಿಧ ವಿದ್ಯಾರ್ಥಿ ವೇತನ, ಗ್ರಂಥಾಲಯದೊಂದಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಾಸ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ವಿಶೇಷ ಪ್ರಾಮುಖ್ಯತೆ ನೀಡಲಾಗುತ್ತದೆ. ಪದವಿಪೂರ್ವ ಶಿಕ್ಷಣದೊಂದಿಗೆ HESP, HEBA ಹಾಗೂ EBAC ಕೋರ್ಸ್‌ಗಳೂ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಕಟಿಸಿರುವ ದೂರವಾಣಿ ಸಂಖ್ಯೆಗಳು ಹಾಗೂ ಇಮೇಲ್ ಮೂಲಕ ಸಂಪರ್ಕಿಸಬಹುದು ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
ಇಮೇಲ್ ಐಡಿ: svtgirls@gmail.com
ದೂರವಾಣಿ ಸಂಖ್ಯೆ:
ಪ್ರೌಢಶಾಲಾ ವಿಭಾಗ: 9900987331
ಪದವಿ ಪೂರ್ವ ವಿಭಾಗ:
9480158295
9448155634 (ಆಂಗ್ಲ ಮಾಧ್ಯಮ)
ಪದವಿ ವಿಭಾಗ: 9980951976













