ಸಿಲಿಂಡರ್ ಬೆಲೆ ,ಬರೊಬ್ಬರಿ 993 ರೂ. ಏರಿಕೆ

ಇಂದಿನಿಂದ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ರೂ. 993 ರೂ ಗಳಿಗೆ ಏರಿಕೆ ಮಾಡಲಾಗಿದೆ.
ಈ ವರ್ಷದಲ್ಲಿ ಮೂರನೇ ಬಾರಿಗೆ ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ನ ಬೆಲೆ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ನ ಬೆಲೆ ರೂ.3071.5 ರೂ, ಬೆಂಗಳೂರಿನಲ್ಲಿ 3154 ರೂಪಾಯಿ ತಲುಪಿದೆ.
ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಹಾಗೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸ್ಪಷ್ಟಪಡಿಸಿದೆ.
ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ತೈಲಬೆಲೆ ಏರಿಕೆ ಕಂಡಿದೆ ಎನ್ನಲಾಗುತ್ತಿದ್ದು ಈ ದರ ಹೆಚ್ಚಳವು ಹೋಟೆಲ್ ಮತ್ತು ಕೈಗಾರಿಕಾ ವಲಯದ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ.



















