
ಕರಾವಳಿಯಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರೆಯಲಿದೆ. ಉತ್ತರ ಕರ್ನಾಟಕದ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಹಾಸನ ಕೊಡಗು ಬಳ್ಳಾರಿ, ಮೈಸೂರು, ಮಂಡ್ಯ, ಚಾಮರಾಜ ರಾಮನಗರ ತುಮಕೂರು ಭಾಗಗಳಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



















