
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆಯ ವೇಳೆಗೆ ಸಾಧಾರಣ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನ ನಗರದಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ.
ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಂಗಳೂರು, ಉಡುಪಿ ಮತ್ತು ಕಾರವಾರ ಭಾಗಗಳಲ್ಲಿ ಉಷ್ಣಾಂಶ ಹೆಚ್ಚಿರಲಿದ್ದು ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.




















