
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲೂ ಗುಡುಗು ಮಿಂಚು ಸಹಿತ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು ,ಹಾಸನ ,ಕೊಡಗು, ಮಂಡ್ಯ ಮೈಸೂರು ಭಾಗಗಳಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಆಗಲಿದೆ.
ಕರಾವಳಿ ಮತ್ತು ಉತ್ತರವಳ ನಾಡಿನ ಬೆಳಗಾವಿ ಧಾರವಾಡ ಗದಗ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ.



























