
ಶಿವಮೊಗ್ಗ: ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ ಸಕ್ರೆಬೈಲು ಆನೆ ಬಿಡಾರಕ್ಕೆ ಮೇ 21ರಿಂದ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಇತ್ತೀಚೆಗೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಅವಘಡದ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕೃಷ್ಣ ಪಟಗಾರ್ ತಿಳಿಸಿದ್ದಾರೆ.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರ ನಿರ್ದೇಶನದಂತೆ ಹೊಸ ಸುರಕ್ಷತಾ ಮಾರ್ಗಸೂಚಿಗಳು ಸಿದ್ಧವಾಗುವವರೆಗೆ ಆನೆ ಬಿಡಾರವನ್ನು ಸಾರ್ವಜನಿಕರಿಗೆ ಮುಚ್ಚಲಾಗಿದೆ. ಈ ಅವಧಿಯಲ್ಲಿ ಅರಣ್ಯ ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರವಾಸಿಗರಿಗೆ ಮನವಿ ಮಾಡಲಾಗಿದೆ.



























