
ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ನಗರ ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದ ಭಾಗಗಳಲ್ಲಿ ಮಳೆಯಾಗಲಿದ್ದು ಆರೆಂಜ್ ಘೋಷಿಸಲಾಗಿದೆ.
ಉತ್ತರ ಕನ್ನಡ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ.
ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ ,ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಘೋಷಣೆ ಮಾಡಲಾಗಿದೆ.



























