
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು ಎರಡು ಜಿಲ್ಲೆಗಳಿಗೆ ಆರೆಂಜ್ ಘೋಷಣೆ ಮಾಡಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ,ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.




























