
ಮುಂದಿನ ಎರಡು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಭಾಗಗಳಲ್ಲಿ ಮಳೆ ಹೆಚ್ಚಿರಲಿದ್ದು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ದಕ್ಷಿಣ ಒಳನಾಡಿನ ಹಾಸನ ,ಕೊಡಗು ಮತ್ತು ಮೈಸೂರು ಭಾಗಗಳಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು ,ದಾವಣಗೆರೆ ,ಮಂಡ್ಯ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯ ಸಾಧ್ಯತೆ ಇದೆ.
ಕರಾವಳಿ ಕರ್ನಾಟಕದ ಭಾಗಗಳಾದ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




























