ಮೂರು ತಿಂಗಳೊಳಗೆ ತೀರ್ಪು ಪ್ರಕಟಿಸಲು ಹೈಕೋರ್ಟ್ಗಳಿಗೆ ಆದೇಶ

ನವದೆಹಲಿ: ತೀರ್ಪುಗಳು ಮತ್ತು ಜಾಮೀನು ಆದೇಶಗಳ ವಿಳಂಬಕ್ಕೆ ಕಡಿವಾಣ ಹಾಕಲು ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಸಂವಿಧಾನದ 142ನೇ ವಿಧಿಯಡಿ ಈ ಆದೇಶ ನೀಡಿದೆ.
ಹೈಕೋರ್ಟ್ಗಳು ಯಾವುದೇ ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಗರಿಷ್ಠ ಮೂರು ತಿಂಗಳೊಳಗೆ ತೀರ್ಪು ಪ್ರಕಟಿಸಬೇಕು ಎಂದು ಕೋರ್ಟ್ ಸೂಚಿಸಿದೆ. ಜಾಮೀನು ಅರ್ಜಿಗಳ ವಿಚಾರದಲ್ಲಿ ಸಾಧ್ಯವಾದರೆ ಅದೇ ದಿನ, ಇಲ್ಲವಾದರೆ ಮರುದಿನ ಆದೇಶ ಪ್ರಕಟಿಸಿ ವೆಬ್ಸೈಟ್ಗೆ ಅಪ್ಲೋಡ್ ಮಾಡಬೇಕು ಎಂದು ಹೇಳಿದೆ.
ಜಾಮೀನು ಅಥವಾ ಶಿಕ್ಷೆ ಅಮಾನತು ಆದೇಶ ಬಂದ ತಕ್ಷಣ ಜೈಲು ಅಧಿಕಾರಿಗಳಿಗೆ ಮಾಹಿತಿ ತಲುಪಿಸಿ, ಕೈದಿಗಳನ್ನು ಅದೇ ದಿನ ಅಥವಾ ಮರುದಿನ ಬಿಡುಗಡೆ ಮಾಡುವಂತೆ ಸೂಚಿಸಲಾಗಿದೆ.
ಹೈಕೋರ್ಟ್ಗಳ ಎಲ್ಲಾ ತೀರ್ಪುಗಳನ್ನು 24 ಗಂಟೆಗಳೊಳಗೆ ಅಧಿಕೃತ ವೆಬ್ಸೈಟ್ಗೆ ಅಪ್ಲೋಡ್ ಮಾಡುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಜಾರ್ಖಂಡ್ ಹೈಕೋರ್ಟ್ನಲ್ಲಿ ತೀರ್ಪು ವಿಳಂಬವಾದ ಪ್ರಕರಣದ ವಿಚಾರಣೆ ವೇಳೆ ಈ ಆದೇಶ ನೀಡಲಾಗಿದೆ. ನ್ಯಾಯದಾನ ವ್ಯವಸ್ಥೆಯನ್ನು ವೇಗಗೊಳಿಸುವ ಉದ್ದೇಶದಿಂದ ಈ ನಿಯಮ ಜಾರಿಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.




























