
ರಾಜ್ಯದಲ್ಲಿ ಮುಂಗಾರು ಪೂರ್ವ ಮಾರುತಗಳು ಮತ್ತು ಚಂಡಮಾರುತದ ಪ್ರಭಾವ ತೀವ್ರಗೊಂಡಿದ್ದು ,ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಬಾರಿ ಮಳೆಯಾಗಲಿದೆ. ಶಿವಮೊಗ್ಗ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.
ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯ ಸೂಚನೆ ನೀಡಲಾಗಿದೆ.






















































































