
ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ತೈಲ ಮಾರುಕಟ್ಟೆ ಕಂಪನಿಗಳು ಹೆಚ್ಚಿಸಿವೆ. ಪರಿಷ್ಕೃತ ದರಗಳು ಜೂನ್ 1ರಿಂದಲೇ ಜಾರಿಗೆ ಬಂದಿವೆ.
ಬೆಲೆ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್ ಹಾಗೂ ಸಣ್ಣ ಉದ್ಯಮಗಳ ವೆಚ್ಚ ಹೆಚ್ಚುವ ಸಾಧ್ಯತೆ ಇದೆ. ಆದರೆ ಗೃಹಬಳಕೆಯ 14.2 ಕೆಜಿ ಎಲ್ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವುದು ಗ್ರಾಹಕರಿಗೆ ಸ್ವಲ್ಪ ನಿರಾಳತೆ ನೀಡಿದೆ.
ದೆಹಲಿ ನಗರದಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 42 ರೂಪಾಯಿ ಏರಿಕೆಯಾಗಿದ್ದು, ಕೋಲ್ಕತಾದಲ್ಲಿ 53.50 ರೂಪಾಯಿ ಹೆಚ್ಚಳ ದಾಖಲಾಗಿದೆ. ಇದೇ ವೇಳೆ 5 ಕೆಜಿ ಎಫ್ಟಿಎಲ್ ಸಿಲಿಂಡರ್ ದರವನ್ನೂ 11 ರೂಪಾಯಿ ಹೆಚ್ಚಿಸಲಾಗಿದೆ.
ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದು, ಅಗತ್ಯ ಪ್ರಮಾಣದ ಎಲ್ಪಿಜಿ ಹಾಗೂ ಇತರ ಪೆಟ್ರೋಲಿಯಂ ಉತ್ಪನ್ನಗಳ ಸಂಗ್ರಹ ಲಭ್ಯವಿದೆ ಎಂದು ತಿಳಿಸಿದೆ. ಜೊತೆಗೆ ಭವಿಷ್ಯದ ಅಗತ್ಯತೆಗಳನ್ನು ಗಮನದಲ್ಲಿಟ್ಟು ಎಲ್ಪಿಜಿ ಮತ್ತು ಕಚ್ಚಾ ತೈಲದ ಮೀಸಲು ಸಂಗ್ರಹ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




























