
ನವದೆಹಲಿ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪೋಂದನ್ನು ಹೊರಡಿಸಿದ್ದು ಅದೇನೆಂದರೆ ಕಾಯಂ ಮತ್ತು ತಾತ್ಕಾಲಿಕ ನೌಕರರ ನಡುವೆ ಸವಲತ್ತು ಹಾಗೂ ನಿವೃತ್ತಿ ಪ್ರಯೋಜನಗಳ ವಿಚಾರದಲ್ಲಿ ತಾರತಮ್ಯ ಮಾಡಬಾರದು. ಕಾಯಂ ಸಿಬ್ಬಂದಿಯಂತೆ ಕೆಲಸ ನಿರ್ವಹಿಸುವ ತಾತ್ಕಾಲಿಕ ನೌಕರರ ಹಕ್ಕುಗಳನ್ನು ನಿರಾಕರಿಸಲಾಗದು ಎಂದು ನ್ಯಾಯಾಲಯ ತಿಳಿಸಿದೆ.
ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಹಾಗೂ ಎ.ಜಿ. ಮಸಿಹ್ ಅವರ ಪೀಠವು ಈ ಸಂಬಂಧ ಪಾಟ್ನಾ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದೆ. ಅಂಚೆ ಇಲಾಖೆಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿದ್ದ ನೈಟ್ ಗಾರ್ಡ್ ಆಗಿ ಕಾರ್ಯನಿರ್ವಹಿಸಿದ್ದ ತಾತ್ಕಾಲಿಕ ನೌಕರರಿಗೆ ಪಿಂಚಣಿ ಸೌಲಭ್ಯ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮಾಜಿ ನೌಕರರಿಗೆ ಮೂರು ತಿಂಗಳೊಳಗೆ ಪಿಂಚಣಿ ಮತ್ತು ನಿವೃತ್ತಿ ಸವಲತ್ತುಗಳನ್ನು ಒದಗಿಸಬೇಕು. ವಿಳಂಬವಾದರೆ ವಾರ್ಷಿಕ ಶೇ.6 ಬಡ್ಡಿಯೊಂದಿಗೆ ಹಣ ಪಾವತಿಸಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿದೆ.




























