
ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಧಾರವಾಡ ,ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಹಾಸನ ,ಕೊಡಗು ,ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಾಧಾರಣ ಬಳಿಯಾಗಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.




























