ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮ

ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ. ಶಿವಕುಮಾರ್ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿತ್ತು. ಬೆಳಗ್ಗೆಯಿಂದ ಸಂಜೆವರೆಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಕಚೇರಿಗೆ ಆಗಮಿಸಿ ಸಂತಸ ವ್ಯಕ್ತಪಡಿಸಿ, ಚರ್ಚೆ ಮಾತುಕತೆಗಳು ನಡೆಯಿತು. ಕಾಂಗ್ರೆಸ್ ಕಾರ್ಯಕರ್ತರಿಗೆ, ಸಾರ್ವಜನಿಕರಿಗೆ ಪ್ರಮಾಣವಚನ ಸಮಾರಂಭದ ನೇರ ಪ್ರಸಾರ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿತ್ತು. ಅಪಾರ ಸಂಖ್ಯೆಯಲ್ಲಿ ನೆರೆ ಪ್ರಸಾರ ವೀಕ್ಷಣೆ ಮಾಡಿದರು.
ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಕಳ ಕಾಂಗ್ರೆಸ್ ನಾಯಕ ಉದಯ್ ಶೆಟ್ಟಿ ಮುನಿಯಾಲು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್, ಇನ್ನಿತರೆ ಮುಖಂಡರು, ಗಣ್ಯರು ಬೆಂಗಳೂರಿಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿ ನೂತನ ಸಿಎಂಗೆ ಅಭಿನಂದಿಸಿದರು.






























