25.1 C
Udupi
Friday, June 5, 2026
spot_img
spot_img
HomeBlogಮುದ್ರಾಡಿಯಲ್ಲಿ ಬ್ಯಾಂಕಿಂಗ್ ಸವಲತ್ತುಗಳ ಮಾಹಿತಿ ಕಾರ್ಯಕ್ರಮ

ಮುದ್ರಾಡಿಯಲ್ಲಿ ಬ್ಯಾಂಕಿಂಗ್ ಸವಲತ್ತುಗಳ ಮಾಹಿತಿ ಕಾರ್ಯಕ್ರಮ


ಹೆಬ್ರಿ :ಗ್ರಾಹಕರಿಗೆ ವಿವಿಧ ಸಾಲ ಸೌಲಭ್ಯಗಳು ದೊರೆಯುತ್ತದೆ. .ಪ್ರತಿಯೊಬ್ಬರೂ ತಮ್ಮ ಸಮೀಪದ ಬ್ಯಾಂಕ್ ನಲ್ಲಿ ಖಾತೆಯನ್ನು ತೆರೆದು ಗ್ರಾಹಕರಿಗೆ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಪಡೆದು ಆರ್ಥಿಕವಾಗಿ ಸದೃಢರಾಗಿ. ಠೇವಣಿಯನ್ನು ಹೂಡಲು ವಿಪುಲ ಅವಕಾಶಗಳಿವೆ.ಉನ್ನತ ಶಿಕ್ಷಣವನ್ನು ಪಡೆಯುವ ಮಕ್ಕಳಿಗೆ ಯೂನಿಯನ್ ಬ್ಯಾಂಕ್ ನಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ದೊರಕುತ್ತದೆ.

ಮುಂದಿನ ದಿನಗಳಲ್ಲಿ ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಪೋಷಕರು ಮಕ್ಕಳಿಗೆ ಸಹಕರಿಸಿ ಎಂದು ಉಡುಪಿ ಯೂನಿಯನ್ ಬ್ಯಾಂಕ್ ನ ಪ್ರಾದೇಶಿಕ ಕಚೇರಿಯ ಮುಖ್ಯ ಪ್ರಬಂಧಕರಾದ ನಿಂಗಣ್ಣಗೌಡ ಪಾಟೀಲ್ ಹೇಳಿದರು.
ಅವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ಪಾಲ್ಗೊಂಡು ಮಕ್ಕಳಿಗೆ ಮತ್ತು ಪೋಷಕರಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ವೇದಿಕೆಯಲ್ಲಿ ಉಡುಪಿ ಪ್ರಾದೇಶಿಕ ಕಚೇರಿಯ ಹಿರಿಯ ಪ್ರಬಂಧಕರಾದ ಕಾರ್ತಿಕ್ ಸಿ. ನಾಯ್ಕ್, ಮುದ್ರಾಡಿ ಶಾಖೆಯ ಪ್ರಬಂಧಕರಾದ ಮಯೂರ್ ವಿ. ಗಾಯಕ್ ವಾಡ್, ಡಾ. ಎಂ. ಎಸ್. ರಾವ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಉಪಸ್ಥಿತರಿದ್ದರು. ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಸ್ವಾಗತಿಸಿದರು. ಶಿಕ್ಷಕ ಪಿ. ವಿ. ಆನಂದ ಕಾರ್ಯಕ್ರಮ ನಿರೂಪಿಸಿ, ಶ್ಯಾಮಲಾ ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page