
ಎಸ್.ವಿ.ಟಿ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಜೂನ್ 5 ರಂದು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು, ದಿವ್ಯ ಅರ್ಜುನ್ ಕುಮಾರ್ ಇವರು ಅತಿಥಿಗಳಾಗಿ ಆಗಮಿಸಿ ಕರ್ನಾಟಕದ ವಿಶೇಷ ಕಾಡುಗಳ ಬಗ್ಗೆ ಮಾಹಿತಿ ನೀಡಿ ಗಿಡ ನೆಡುವ ಬಗ್ಗೆ ಹಾಗೂ ಗಿಡಮರಗಳಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು.
ಬೀಜ ಸಂರಕ್ಷಣೆ ಹಾಗೂ ಬೀಜದ ಉಂಡೆ ತಯಾರಿಯ ಬಗ್ಗೆ ವಿಶೇಷ ಮಾಹಿತಿಯನ್ನು ಮಕ್ಕಳೊಂದಿಗೆ ಹಂಚಿ ಕೊಂಡು ಬೀಜದುಂಡೆ ತಯಾರಿಯ ಪ್ರಾತ್ಯಕ್ಷಿಕೆಯನ್ನು ನೀಡಿದರು. ಎಸ್. ವಿ. ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಕೆ ಪಿ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಪರಿಸರ ದಿನಾಚರಣೆಯ ಅಂಗವಾಗಿ ಶಾಲೆಯ ಆವರಣದಲ್ಲಿ ಗಿಡವೊಂದನ್ನು ನೆಟ್ಟು ಅದನ್ನು ಪೋಷಿಸುವ ಬಗ್ಗೆ ಮಕ್ಕಳಿಗೆ ಮಾಹಿತಿಯನ್ನು ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಮಾಲಿನಿ, ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
































